Today: 26.Apr.2018

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.40 ಲಕ್ಷ ರೂ

ದಾಖಲೆ ಇಲ್ಲದೆ ಸಾಗಿಸುತ್ತಿದ್ದ 2.40 ಲಕ್ಷ ರೂ ಬೋಯಿಪಲ್ಲಿ ಚೆಕ್ ಪೋಸ್ಟ್ ನಲ್ಲಿ ವಶ
11 Apr 2018 0 comment
(0 votes)
 
ಬಾಗೇಪಲ್ಲಿ : ಸೂಕ್ತ ದಾಖಲೆಗಳಿಲ್ಲದೆ ಇನೋವಾ ಕಾರಿನಲ್ಲಿ ಸಾಗಿಸುತ್ತಿದ್ದ 2.40 ಲಕ್ಷ ರೂಗಳನ್ನು  ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ಆಂಧ್ರ ಗಡಿಭಾಗದ ಬಿಳ್ಳೂರು ಸಮೀಪದ ಬೋಯಿಪಲ್ಲಿ ಚೆಕ್ ಪೋಸ್ಟ್ ನಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. 
 
   ಆಂಧ್ರ ಪ್ರದೇಶದ ಕದಿರಿ ಕಡೆಯಿಂದ ಬಿಳ್ಳೂರು ಕಡೆ ಬರುತ್ತಿದ್ದ ಇನೋವಾ ಕಾರನ್ನು ಇಲ್ಲಿನ ಬೋಯಿಪಲ್ಲಿ ಚೆಕ್ ಪೋಸ್ಟ್ ನಲ್ಲಿ ಚುನಾವಣಾ ಅಧಿಕಾರಿಗಳು ತನಿಖೆ ನಡೆಸಿದಾಗ ಬ್ಯಾಗ್ ಒಂದರಲ್ಲಿ  ದಾಖಲೆ ಇಲ್ಲದೆ ಹಣ ಪತ್ತೆಯಾಗಿದ್ದು ಈ ಹಣವನ್ನು ಚುನಾವಣಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆಂದು ವರದಿಯಾಗಿದೆ. 
 
 ಬೋಯಿಪಲ್ಲಿ ಚೆಕ್ ಪೋಸ್ಟ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ  ಪಿಡಿಓ ಶಂಕರರೆಡ್ಡಿ, ಎಓ ಪ್ರಭು, ಮತ್ತು ಪಿಸಿ ಚಂದ್ರಶೇಖರ್ ನೇತೃತ್ವದ ತಂಡ ಈ ಸಂದರ್ಭದಲ್ಲಿ ಹಾಜರಿದ್ದರು. 
 ಈ ಪ್ರಕರಣವನ್ನು ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ಚುನಾವಣಾ ಅಧಿಕಾರಿಗಳು ದೂರು ದಾಖಲಿಸಿದ್ದಾರೆ. 
Login to post comments

ನಮ್ಮನ್ನು ಸಂಪರ್ಕಿಸಿ

        : Netra Anand, Kuvempu Nagar,Hassan-573201
T     : +91 94838 76052  
M       : +91 92414 78179

ಹಕ್ಕುಸ್ವಾಮ್ಯ

ಸಂಪಾದಕರು ಮತ್ತು ಪ್ರಕಾಶಕರು| ನೇತ್ರಾ ಆನಂದ್ | ವಿನ್ಯಾಸ ಮತ್ತು ಪ್ರಸರಣ ಕೊಂಡಿನ್ಯೂಸ್©2017 | www.kondinews.com  | ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ವಿನ್ಯಾಸ: Sum-perk Multimedia  ಕೊಂಡಿ ಬೆಂಬಲಿಗರು: