Today: 22.Oct.2017

ಕಾಂಗ್ರೆಸ್ ಪ್ರತಿಭಟನೆ Featured

ಬಿಜೆಪಿ ಕಛೇರಿ ಮುಂದೆ ಯುವ ಕಾಂಗ್ರೆಸ್ ಪ್ರತಿಭಟನೆ

13 Jul 2017 0 comment
(0 votes)
 

ಹಾಸನ, ಜು.೧೨: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಪಡೆದಿರುವ ಕೃಷಿ ಸಾಲಮನ್ನಾಕ್ಕೆ ಆಗ್ರಹಿಸಿ ಕಾಂಗ್ರೇಸ್ ಕಾರ್ಯಕರ್ತರು ಜಿಲ್ಲಾ ಬಿಜೆಪಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಜಿಲ್ಲಾ ಕಾಂಗ್ರೆಸ್ ಕಛೇರಿ ಆವರಣದಿಂದ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಡಾ.ಮಂಥರ್‌ಗೌಡ ನೇತೃತ್ವದಲ್ಲಿ ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ಬಿಜೆಪಿ ಜಿಲ್ಲಾ ಕಛೇರಿ ಬಳಿ ಬಂದ ಕಾಂಗ್ರೆಸ್ ಕಾರ್ಯಕರ್ತರು, ರಾಜ್ಯ ಸರ್ಕಾರ ಈಗಾಗಲೇ ಸಹಕಾರಿ ಸಂಸ್ಥೆಗಳಲ್ಲಿ ಪಡೆದಿರುವ ಕೃಷಿ ಸಾಲದಲ್ಲಿ ೫೦ ಸಾವಿರ ರೂ.ಗಳನ್ನ ಮನ್ನಾ ಮಾಡಿದೆ. ಹಾಗೆಯೇ, ಕೇಂದ್ರ ಸರ್ಕಾರ ರೈತರು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಪಡೆದಿರುವ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡ ಸೃಜನ್ ಬಿ. ಗೌಡ, ಅಕ್ಷಯ್, ಯುವರಾಜು, ಶಮಂತ್, ಮಂಜು, ಪವನ್, ನಿಧಿ, ಪುನೀತ್‌ಗೌಡ, ಚಂದ್ರಶೇಖರ್, ಭುವನಾಕ್ಷ, ನವೀದ್, ಫರ್ಮಾನ್, ಶಾಹಿದ್ ಮತ್ತಿತರರು ಪಾಲ್ಗೊಂಡಿದ್ದರು.

Login to post comments

ನಮ್ಮನ್ನು ಸಂಪರ್ಕಿಸಿ

        : Netra Anand, Kuvempu Nagar,Hassan-573201
T     : +91 94838 76052  
M       : +91 92414 78179

ಹಕ್ಕುಸ್ವಾಮ್ಯ

ಸಂಪಾದಕರು ಮತ್ತು ಪ್ರಕಾಶಕರು| ನೇತ್ರಾ ಆನಂದ್ | ವಿನ್ಯಾಸ ಮತ್ತು ಪ್ರಸರಣ ಕೊಂಡಿನ್ಯೂಸ್©2017 | www.kondinews.com  | ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ವಿನ್ಯಾಸ: Sum-perk Multimedia  ಕೊಂಡಿ ಬೆಂಬಲಿಗರು:  good hits