Today: 23.Sep.2018

ಪರಿಸರ ಕಾಳಜಿ ಮುಖ್ಯ Featured

ಓದುವ ಪರಿಸರವನ್ನು ಉತ್ತಮ ರೀತಿಯಲ್ಲಿ ಇಟ್ಟುಕೊಳ್ಳಬೇಕು - ಡಾ. ಎಚ್.ಆರ್. ಸ್ವಾಮಿ

11 Oct 2017 0 comment
(0 votes)
 

ಅರಕಲಗೂಡು : ವಿದ್ಯಾರ್ಥಿಗಳು ತಾವು ಓದುವ ಪರಿಸರವನ್ನು ಮೊದಲು ಉತ್ತಮ ರೀತಿಯಲ್ಲಿ ಇಟ್ಟುಕೊಳ್ಳಬೇಕು ಎಂದು ಬಾಳೇನಹಳ್ಳಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ. ಎಚ್.ಆರ್. ಸ್ವಾಮಿ ತಿಳಿಸಿದರು.

ಅರಕಲಗೂಡು ತಾಲೂಕು ಕೊಣನೂರಿನ ಬಿ.ಎಂ.ಶೆಟ್ಟಿ.ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೧೭-೧೮ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್.ಎಸ್.ಎಸ್., ಸ್ಕೌಟ್ಸ್ ಮತ್ತು ಗೈಡ್ಸ್, ಯುವ ರೆಡ್ ಕ್ರಾಸ್ ಹಾಗೂ ಇತರೆ ಪಠ್ಯೇತರ ಚಟುವಟಿಕೆಗಳ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಓದಿನ ಜೊತೆಯಲ್ಲಿ ಮಾತ್ರ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಆರೋಗ್ಯವೇ ಭಾಗ್ಯ ಎಂಬಂತೆ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ದೈಹಿಕ ಹಾಗೂ ಮಾನಸಿಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದು ತಿಳಿಸಿದರು.

ನಿವೃತ್ತ ಉಪನ್ಯಾಸಕ ಕೆ.ಎಸ್. ವಾಸುವೇವ್ ಮಾತನಾಡಿ ನಮ್ಮ ದೇಶ ಪ್ರಗತಿ ಹೊಂದಬೇಕಾದರೆ ಶಿಕ್ಷಣಕ್ರಾಂತಿ ಅತ್ಯವಶ್ಯಕವಾಗಿದ್ದು ಇಂದಿನ ಸಮಾಜದಲ್ಲಿ ವಿದ್ಯಾವಂತರಾದರೆ ಹಳ್ಳಿ, ಗ್ರಾಮ ಮತ್ತು ದೇಶದಲ್ಲಿ ಬದಲಾವಣೆ ತರಲು ಸಾಧ್ಯ, ವಿದ್ಯಾರ್ಥಿಗಳಲ್ಲಿ ಆಸಕ್ತಿ ಮನೋಭಾವ ಬಹಳ ಮುಖ್ಯವಾಗಿದ್ದು ಅದನ್ನು ರೂಢಿಸಿಕೊಳ್ಳಬೇಕು. ಎಂದು ತಿಳಿಸಿದರು.

ಚಲನಚಿತ್ರ ನಿರ್ದೇಶಕ ಎಂ.ಡಿ. ಹಾಷಂ ಮಾತನಾಡಿ ವಿದ್ಯಾರ್ಥಿಗಳು ತಮ್ಮನ್ನು ತಾವು ತಿದ್ದಿಕೊಳ್ಳುವುದಕ್ಕೆ ಇಂತಹ ವೇದಿಕೆಗಳು ಸಹಕಾರಿಯಾಗಿರುವುದಲ್ಲದೇ ಮುಂದಿನ ನಿಮ್ಮ ಜೀವನ ಉತ್ತಮವಾಗಿ ರೂಪುಗೊಳ್ಳಲು ಸಹ ಅನುಕೂಲವಾಗುತ್ತದೆ ಹೀಗಾಗಿ ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಂಡು ಭವ್ಯ ಭಾರತವನ್ನು ನಿರ್ಮಾಣ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಿಡಿಸಿ ಉಪಾಧ್ಯಕ್ಷ ಕೆ.ಎ. ಶ್ರೀಧರ್, ಪ್ರಾಂಶುಪಾಲ ಎಂ.ಕೆ. ಮುತ್ತಯ್ಯ ಮುಂತಾದವರು ಮಾತನಾಡಿದರು.

ಈ ಸಂದರ್ಭದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರುಗಳಾದ ಕೆ.ವಿ. ಶ್ರೀನಿವಾಸಮೂರ್ತಿ, ಕೆ.ಎಸ್. ವಾಸುದೇವ್, ಎಂ.ಡಿ. ಹಾಷಂ, ಸೋಮಶೇಖರ್, ನಾಗರಾಜ್, ಸುರೇಶ್, ದೈಹಿಕ ನಿರ್ದೇಶಕರು, ಕ್ರೀಡಾ ಹಾಗೂ ಯುವ ರೆಡ್ ಕ್ರಾಸ್ ವಿಭಾಗದ ಸಂಚಾಲಕ ಬಿ.ಎನ್.ಲಕ್ಷ್ಮೀಶ್, ಎನ್.ಎಸ್.ಎಸ್.ಅಧಿಕಾರಿ ಎಂ. ಮಹೇಶ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಚಾಲಕ ಡಾ. ಸತ್ಯನಾರಾಯಣ, ಭೋಧಕ ವೃಂದದವರಾದ ಚಂದ್ರೇಗೌಡ, ಶರತ್, ಪ್ರಕಾಶ್, ಸಿದ್ದುಮಹದೇವ್, ಸುನಿಲ್, ಶಂಕರಪ್ಪ, ಭಾರತಿ, ಮುನಿಲಕ್ಷ್ಮಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- ಕೊಂಡಿ ನ್ಯೂಸ್, ಅರಕಲಗೂಡು

Login to post comments

ನಮ್ಮನ್ನು ಸಂಪರ್ಕಿಸಿ

        : Netra Anand, Kuvempu Nagar,Hassan-573201
T     : +91 94838 76052  
M       : +91 92414 78179

ಹಕ್ಕುಸ್ವಾಮ್ಯ

ಸಂಪಾದಕರು ಮತ್ತು ಪ್ರಕಾಶಕರು| ನೇತ್ರಾ ಆನಂದ್ | ವಿನ್ಯಾಸ ಮತ್ತು ಪ್ರಸರಣ ಕೊಂಡಿನ್ಯೂಸ್©2018 | www.kondinews.com  | ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ವಿನ್ಯಾಸ: Sum-perk Multimedia  ಕೊಂಡಿ ಬೆಂಬಲಿಗರು: