Today: 23.Sep.2018

ಮನೆ ಮನೆ ಕಾಂಗ್ರೆಸ್ Featured

ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ಬಿ.ಎನ್. ಪ್ರಮೋದ್ ಚಾಲನೆ

21 Oct 2017 0 comment
(0 votes)
 


ಹಾಸನ: ಇಡೀ ದೇಶದಲ್ಲಿ ಅಭಿವೃದ್ಧಿ ಪಥದಲ್ಲಿರುವ ರಾಜ್ಯ ಎಂದರೇ ಅದು ಕರ್ನಾಟಕ ಎಂದು ಕಾಂಗ್ರೆಸ್ ಮುಖಂಡ ಬಿ.ಎನ್. ಪ್ರಮೋದ್ ಅಭಿಪ್ರಾಯಪಟ್ಟರು.

ಸಕಲೇಶಪುರ-ಆಲೂರು-ಕಟ್ಟಾಯ ವಿಧಾನ ಸಭಾ ಕ್ಷೇತ್ರದ ಗೊರೂರು ಗ್ರಾಮದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಜನಪರ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿರುವ  ಮನೆ ಮನೆಗೆ ಕಾಂಗ್ರೆಸ್ ಕಾಂಗ್ರೆಸ್ ಕಾರ್ಯಕ್ರಮಕ್ಕೆ  ಗೊರೂರು ಲಕ್ಷ್ಮಿನರಸಿಂಹ ಸ್ವಾಮಿ ದೇವಾಲಯದ ಆವರಣದಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾನ್ಯ ಜನರ, ದೀನ ದಲಿತರ, ಬಡವರ, ರೈತರ,ಕಾರ್ಮಿಕರ,ಮಹಿಳೆಯರ ಮತ್ತು ಅಲ್ಪಾಸಂಖ್ಯಾತರ ಕಲ್ಯಾಣಕ್ಕಾಗಿ ಹಲವಾರು ಜನಪರ ಯೋಜನೆಗಳನ್ನು ತಂದಿದ್ದು, ಇವುಗಳ ಬಗ್ಗೆ  ಕಾರ್ಯಕರ್ತರು ಪ್ರತಿಯೊಂದು ಮನೆ ಮನೆಗೆ ತೆರೆಳಿ ಜಾಗೃತಿ ಮೂಡಿಸಿ ಸವಲತ್ತು ಸುದುಪಯೋಗ ಪಡಿಸಿಕೊಳ್ಳಲು ಸಹಕಾರ ನೀಡಬೇಕು ಎಂದರು.

ಸಾಮಾಜಿಕ ನ್ಯಾಯದ ಪರವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರವರು, ಪ್ರತಿಯೊಂದು ಸಮುದಾಯಕ್ಕೂ ಪ್ರಾತಿನಿದ್ಯ ನೀಡಿ ಅಧಿಕಾರ ಹಂಚಿಕೆ ಮಾಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು. ಕರ್ನಾಟಕ ಪ್ರಾದೇಶಿಕ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಯಶಸ್ವಿಯಾಗಿದ್ದು, ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ನರಸಿಂಹಗೊರೂರು, ರವಿಕುಮಾರ್ ಶಂಕರನಹಳ್ಳಿ, ಅಶೋಕ್ ನಾಯಕರಹಳ್ಳಿ, ಎಸ್.ಜಿ.ಕುಮಾರಸ್ವಾಮಿ, ಯುವ ಕಾಂಗ್ರೆಸ್ ಮುಖಂಡರಾದ ರಾಮು ಗೊರೂರು, ಪ್ರತಾಪ್, ನರಸಿಂಹ ಮುಂತಾದವರು ಇದ್ದರು.

Login to post comments

ನಮ್ಮನ್ನು ಸಂಪರ್ಕಿಸಿ

        : Netra Anand, Kuvempu Nagar,Hassan-573201
T     : +91 94838 76052  
M       : +91 92414 78179

ಹಕ್ಕುಸ್ವಾಮ್ಯ

ಸಂಪಾದಕರು ಮತ್ತು ಪ್ರಕಾಶಕರು| ನೇತ್ರಾ ಆನಂದ್ | ವಿನ್ಯಾಸ ಮತ್ತು ಪ್ರಸರಣ ಕೊಂಡಿನ್ಯೂಸ್©2018 | www.kondinews.com  | ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ವಿನ್ಯಾಸ: Sum-perk Multimedia  ಕೊಂಡಿ ಬೆಂಬಲಿಗರು: