Today: 22.Jul.2018

ಪೆಟ್ರೋಲ್ ಬಂಕ್ ಬಂದ್ Featured

ಪೆಟ್ರೋಲ್ ಬಂಕ್ ಬಂದ್ ಮಾಡಿ ಪ್ರತಿಭಟನೆ

ಮಾಜಿ ಪ್ರಧಾನಿ ದೇವೇಗೌಡರಿಗೂ ಪ್ರತಿಭಟನಾಕಾರರಿಂದ ಮನವಿ ಪತ್ರ ಅರ್ಪಣೆ.

13 Jul 2017 0 comment
(0 votes)
 

ಹಾಸನ, ಜು.12: ನಿತ್ಯದರ ಪರಿಷ್ಕರಣೆ ಪದ್ಧತಿ ಕೈಬಿಡುವಂತೆ ಆಗ್ರಹಿಸಿ, ಪೆಟ್ರೋಲ್ ಬಂಕ್‌ಗಳ ಮಾಲೀಕರು ಮತ್ತು ಕಾರ್ಮಿಕರು ಬುಧವಾರ ತಮ್ಮ ವಹಿವಾಟು ಬಂದ್ ಮಾಡಿ ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ಧರಣಿ ನಡೆಸಿದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರವರನ್ನು ಪ್ರತಿಭಟನಾಕಾರರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ನಗರದ ಹೇಮಾವತಿ ಪ್ರತಿಮೆಯಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಕಛೇರಿಗೆ ಆಗಮಿಸಿ ಧರಣಿ ಮಾಡುವ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜೂನ್ ೧೬ ರಿಂದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇಂಧನ ದರದ ನಿತ್ಯಪರಿಷ್ಕರಣೆ ಪದ್ಧತಿಯು ಅವೈಜ್ಞಾನಿಕವಾಗಿದೆ. ಜಿಲ್ಲೆಯಲ್ಲಿ ಒಟ್ಟು 128 ಪೆಟ್ರೋಲ್ ಬಂಕ್‌ಗಳು ಕಾರ್ಯನಿರ್ವಹಿಸುತ್ತಿವೆ. ಆ ಪೈಕಿ ಶೇ.೪೦ರಷ್ಟು ಬಂಕ್‌ಗಳು ಗ್ರಾಮೀಣ ಪ್ರದೇಶದಲ್ಲಿ ವಹಿವಾಟು ನಡೆಸುತ್ತಿವೆ. ಗ್ರಾಮೀಣ ಭಾಗಗಳಲ್ಲಿ ಇಂಟರ್‌ನೆಟ್ ಸೌಲಭ್ಯಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವುದಿಲ್ಲ. ದೇಶಾದ್ಯಂತ ಶೇ.74ರಷ್ಟು ಪೆಟ್ರೋಲ್ ಬಂಕ್‌ಗಳು ಸಂಪೂರ್ಣ ಆಟೋಮೇಷನ್ ವ್ಯವಸ್ಥೆಗೆ ಒಳಪಟ್ಟಿರುವುದಿಲ್ಲ. ಹಾಗಾಗಿ, ಇಂಟರ್‌ನೆಟ್ ಸೇವೆ ಸ್ಥಗಿತವಾಗುತ್ತಿರುತ್ತದೆ. ಇಂತಹ ಸಂದರ್ಭದಲ್ಲಿ ವಿತರಕನೇ ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ದರಪಟ್ಟಿ ಬದಲಾಯಿಸುವುದು ಕಷ್ಟವಾಗುತ್ತಿದೆ. ಇಂತಹ ವ್ಯವಸ್ಥೆ ಜಾರಿ ಬಂದಿದ್ದರಿಂದ ಇದುವರೆಗೂ ಒಂದು ಲಕ್ಷದಿಂದ ಮೂರು ಲಕ್ಷದವರೆಗೂ ಬಂಕ್ ಮಾಲೀಕರು ನಷ್ಟ ಅನುಭವಿಸಿದ್ದೇವೆಂದು ಮನವಿಯಲ್ಲಿ ವಿವರಿಸಿದ್ದಾರೆ.

ಜುಲೈ 1 ರಂದು ರಾಜ್ಯ ಸರ್ಕಾರ ಶೇ.೫ರಷ್ಟು ಪ್ರವೇಶ ತೆರಿಗೆ ರದ್ದುಪಡಿಸಿದ ಪರಿಣಾಮ ಪ್ರತಿ ವಿತರಕನು ಲಕ್ಷಾಂತರ ರೂ.ಗಳನ್ನ ನಷ್ಟ ಮಾಡಿಕೊಂಡಿದ್ದಾನೆ. ಈ ಎಲ್ಲಾ ನಷ್ಟವನ್ನು ಸರ್ಕಾರ ಮತ್ತು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ತುಂಬಿಕೊಡಬೇಕು ಮತ್ತು ಅವೈಜ್ಞಾನಿಕವಾಗಿರುವ ಇಂತಹ ದಿನನಿತ್ಯ ದರ ಪರಿಷ್ಕರಣೆ ಪದ್ಧತಿಯನ್ನು ಕೈಬಿಟ್ಟು ಹಳೇ ಪದ್ಧತಿಯನ್ನೆ ಮುಂದುವರೆಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲಾ ಪೆಟ್ರೋಲಿಯಂ ವಿತರಕರ ಸಂಘದ ಅಧ್ಯಕ್ಷ ಹೆಚ್. ಮಂಜಪ್ಪ, ಕಾರ್ಯದರ್ಶಿ, ಬಿ.ಎಸ್.ಭಾಸ್ಕರ್, ಉಪಾಧ್ಯಕ್ಷ ಬಿ.ಪ್ರದೀಪ್ ಕುಮಾರ್, ಖಜಾಂಚಿ ಹೆಚ್.ಆರ್. ವಿನಯ್, ನಿರ್ದೇಶಕ ಹೆಚ್.ಸಿ. ಚನ್ನಕೇಶವ ಇತರರು ಇದ್ದರು.

Login to post comments

ನಮ್ಮನ್ನು ಸಂಪರ್ಕಿಸಿ

        : Netra Anand, Kuvempu Nagar,Hassan-573201
T     : +91 94838 76052  
M       : +91 92414 78179

ಹಕ್ಕುಸ್ವಾಮ್ಯ

ಸಂಪಾದಕರು ಮತ್ತು ಪ್ರಕಾಶಕರು| ನೇತ್ರಾ ಆನಂದ್ | ವಿನ್ಯಾಸ ಮತ್ತು ಪ್ರಸರಣ ಕೊಂಡಿನ್ಯೂಸ್©2018 | www.kondinews.com  | ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ವಿನ್ಯಾಸ: Sum-perk Multimedia  ಕೊಂಡಿ ಬೆಂಬಲಿಗರು: