Today: 15.Dec.2017

ಅಭಿನಂದನೆ Featured

ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ

10 Oct 2017 0 comment
(0 votes)
 

ಅರಕಲಗೂಡು: ತಾಲ್ಲೂಕು ಮಟ್ಟದ ಪಿಯು ಕ್ರಿಡಾಕೂಟದ ಯಶಸ್ಸಿಗೆ ಸಹಕರಿಸಿದವರಿಗೆ ಹಾಗೂ ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಇಲ್ಲಿನ ಹಾಸನ ಪಿಯು ಕಾಲೇಜಿನಲ್ಲಿ ಸೋಮವಾರ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. 

ಕಾಲೇಜಿನ ಕಾರ್ಯದರ್ಶಿ ಗಂಗಾಧರ್ ಮಾತನಾಡಿ ಕ್ರೀಡಾಕೂಟದ ಪ್ರಾಯೋಜಕತ್ವವನ್ನು ತಮ್ಮ ಕಾಲೇಜು ವಹಿಸಿಕೊಂಡು ವಿಭಿನ್ನ ರೀತಿಯಲ್ಲಿ ಆಯೋಜಿಸಿದ್ದು ಅಪಾರ ಮೆಚ್ಚುಗೆಗೆ ಪಾತ್ರವಾಗಿದೆ. ಇದಕ್ಕಾಗಿ ರೂ ೬ಲಕ್ಷ ವೆಚ್ಚವಾಗಿದೆ ಎಂದರು. ಕ್ರೀಡೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವ ಯೋಜನೆಯನ್ನು ಮುಂದಿನ ಭಾರಿಯಿಂದ ಜಾರಿಗೆ ತರುವುದಾಗಿ ಹೇಳಿ ಕ್ರೀಡಾಕೂಟಕ್ಕೆ ಸಹಕಾರ ನೀಡಿದ ಎಲ್ಲರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. 

ತಾಲ್ಲೂಕು ಕ್ರೀಡಾಧಿಕಾರಿ ದಯಾನಂದ ಸವದಿ, ತಾಲ್ಲೂಕು ಪ್ರೌಢಶಾಲೆಗಳ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಂಜೀವ್‌ಕುಮಾರ್, ಪ್ರಾಂಶುಪಾಲ ಪಿ.ನವೀನ್ ಮಾತನಾಡಿದರು. ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ದಿನೇಶ್ (ಕರಾಟೆ), ಅಂಜು (ಡಿಸ್ಕಸ್ ಥ್ರೋ) ಹಾಗೂ ಪಿಯು ಕ್ರೀಡಾಕೂಟದ ಆಯೋಜನೆಗೆ ಸಹಕಾರ ನೀಡಿದವರನ್ನು ಗೌರವಿಸಲಾಯಿತು. ಉಪನ್ಯಾಸಕ ಕೃಷ್ಣಮೂರ್ತಿ ಇದ್ದರು.

  • ಕೊಂಡಿನ್ಯೂಸ್, ಅರಕಲಗೂಡು.
Login to post comments

ನಮ್ಮನ್ನು ಸಂಪರ್ಕಿಸಿ

        : Netra Anand, Kuvempu Nagar,Hassan-573201
T     : +91 94838 76052  
M       : +91 92414 78179

ಹಕ್ಕುಸ್ವಾಮ್ಯ

ಸಂಪಾದಕರು ಮತ್ತು ಪ್ರಕಾಶಕರು| ನೇತ್ರಾ ಆನಂದ್ | ವಿನ್ಯಾಸ ಮತ್ತು ಪ್ರಸರಣ ಕೊಂಡಿನ್ಯೂಸ್©2017 | www.kondinews.com  | ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ವಿನ್ಯಾಸ: Sum-perk Multimedia  ಕೊಂಡಿ ಬೆಂಬಲಿಗರು: