Today: 26.Apr.2018

ಕಂದಕಕ್ಕೆ ಬಸ್ ಪಲ್ಟಿ;24 ಮಕ್ಕಳು ಸಾವು

ಕಂದಕಕ್ಕೆ ಬಸ್ ಪಲ್ಟಿ: 24 ಮಕ್ಕಳ ದಾರುಣ ಸಾವು.

09 Apr 2018 0 comment
(0 votes)
 

ಶಿಮ್ಲಾ: ಶಾಲಾ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 24 ಶಾಲಾ ಮಕ್ಕಳು ಸೇರಿ 27 ಮಂದಿ ಮೃತಪಟ್ಟಿರುವ ದಾರುಣ ಘಟನೆ ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ನಡೆದಿದೆ. ಶಾಲೆ ಮುಗಿದ ಬಳಿಕ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭದಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಮೃತ ಪಟ್ಟ ಮಕ್ಕಳಲ್ಲಿ ಹೆಚ್ಚಿನವರು ಸ್ಥಳೀಯ ರಾಮ್ ಸಿಂಗ್ ಪಥಾನಿ ಮೆಮೋರಿಯಲ್ ಪಬ್ಲಿಕ್ ಶಾಲೆಯ 5ನೇ ತರಗತಿಗಿಂತ ಕೆಳಗಿನ ತರಗತಿಯವರು ಎಂದು ತಿಳಿದು ಬಂದಿದೆ. ಘಟನೆ ಕುರಿತು ಮಾಹಿತಿ ಪಡೆದ ರಾಷ್ಟ್ರೀಯ ವಿಪತ್ತು ದಳ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯವನ್ನು ಕೈಗೊಂಡಿದೆ. ಇದುವರೆಗೆ 20 ಶವಗಳನ್ನು ಮೇಲಕ್ಕೆತ್ತಲಾಗಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳದಲ್ಲೇ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಶಾಲಾ ಬಸ್‍ನಲ್ಲಿ 40ಕ್ಕೂ ಹೆಚ್ಚು ಮಕ್ಕಳು ಇದ್ದರು ಎಂದು ಶಾಲಾಧಿಕಾರಿಗಳು ತಿಳಿಸಿದ್ದಾರೆ. ಘಟನೆಯ ಕುರಿತು ಪ್ರಧಾನಿ ಮೋದಿ, ಹಿಮಾಚಲ ಸಿಎಂ ತಮ್ಮ ಸಂತಾಪವನ್ನು ಸೂಚಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಚಾಲಕನ ನಿಯಂತ್ರಣ ತಪ್ಪಿ ಬಸ್ ಕಂದಕಕ್ಕೆ ಉರುಳಿ ಈ ದುರ್ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ

More in this category: « ಭಾರತ್ ಬಂದ್
Login to post comments

ನಮ್ಮನ್ನು ಸಂಪರ್ಕಿಸಿ

        : Netra Anand, Kuvempu Nagar,Hassan-573201
T     : +91 94838 76052  
M       : +91 92414 78179

ಹಕ್ಕುಸ್ವಾಮ್ಯ

ಸಂಪಾದಕರು ಮತ್ತು ಪ್ರಕಾಶಕರು| ನೇತ್ರಾ ಆನಂದ್ | ವಿನ್ಯಾಸ ಮತ್ತು ಪ್ರಸರಣ ಕೊಂಡಿನ್ಯೂಸ್©2017 | www.kondinews.com  | ಎಲ್ಲಾ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ವಿನ್ಯಾಸ: Sum-perk Multimedia  ಕೊಂಡಿ ಬೆಂಬಲಿಗರು: