ಕೊಡಗು: ಜಿಲ್ಲೆಯ ಪ್ರವಾಹ ಪರಿಸ್ಥಿತಿಯನ್ನೇ ಬಂಡವಾಳ ಮಾಡಿಕೊಂಡ ಖದೀಮರ ತಂಡವೊಂದು ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪಲಿನ ಹಲವು ಅಂಗಡಿಗಳಿಗೆ ಖನ್ನ ಹಾಕಿರುವ ಘಟನೆ ತಡವಾಗಿ ಬೆಳಕಿ್ಗೆಗೆ ಬಂದಿದೆ.
ಪ್ರವಾಹವನ್ನೇ ಟಾರ್ಗೆಟ್ ಮಾಡಿಕೊಂಡ ಕಳ್ಳರು, ಮುಳುಗಡೆಯಾಗಿದ್ದ ಅಂಗಡಿಗಳ ರೊಲಿಂಗ್ ಶೆಟರ್ ಮೀಟಿ 20 ಸಾವಿರಕ್ಕೂ ಹೆಚ್ಚು ನಗದು ಹಾಗೂ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ. ಒಂದು ವಾರದಿಂದ ಗೋಣಿಕೊಪ್ಪಲು ಭಾಗದಲ್ಲಿ ಪ್ರವಾಹ ಉಂಟಾಗಿತ್ತು.
ಆದ್ದರಿಂದ ಮಾಲೀಕರು ಅಂಗಡಿ ಬಳಿ ಹೋಗಿರಲಿಲ್ಲ.ಇದನ್ನೇ ನೋಡಿಕೊಂಡ ಚಾಲಾಕಿಗಳು ಅಂಗಡಿಗಳಿಗೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.