ಸ್ಥಳೀಯ ಸುದ್ದಿ

ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನ ತಲುಪಿಸಿ: ಯಶ್ವಂತ್

ಹಾಸನ: ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನ ತಲುಪಿಸುವ ಕಾರ್ಯವನ್ನ ಪ್ರಾಮಾಣಿಕವಾಗಿ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಯಶ್ವಂತ್ ತಿಳಿಸಿದ್ದಾರೆ.

ತಾಲ್ಲೂಕು ಪಂಚಾಯಿತಿಯಲ್ಲಿ ನಡೆದ ತಾಲ್ಲೂಕು ಆರೋಗ್ಯಾಧಿಕಾರಿಗಳ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಆರೋಗ್ಯದ ಕಾರ್ಯಕ್ರಮಗಳ ಬಗ್ಗೆ ಅರಿವು  ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಹೆಚ್ಚಿನ ಅರಿವು ಮೂಡಿಸುವಂತಹ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಕೆಲಸದ ಒತ್ತಡದ ನಡುವೆಯು ನಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದು ಅಧಿಕಾರಿಗಳಿಗೆ ಅವರು ತಿಳಿಸಿದರು.

ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವಿಜಯ್ ಅವರು ಮಾತನಾಡಿ ಆರೋಗ್ಯದ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಅರಿವು ಮೂಡಬೇಕೆಂದರೆ  ಪ್ರತಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸ್ವಚ್ಚತೆ ಹಾಗೂ ಆರೋಗ್ಯದ ಬಗ್ಗೆ ತಿಳುವಳಿಕೆ ಮೂಡಿಸಿದಲ್ಲಿ ಮಾತ್ರ ಜಾಗೃತಿ ಕಾರ್ಯಕ್ರಮವು ಯಶಸ್ವಿಯಾಗುವುದು ಎಂದು ಅವರು ತಿಳಿಸಿದರು. ಮಕ್ಕಳಲ್ಲಿ ರಕ್ತಹೀನತೆ ಹಾಗೂ ಬುದ್ದಿ ಮಾಂದ್ಯತೆಯನ್ನು ತಡೆಯುವ ಉದ್ದೇಶದಿಂದ ಪ್ರತಿ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕರನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗುವುದು. ಅಲ್ಲದೆ, ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಟಮಿನ್ ಮಾತ್ರೆಗಳನ್ನು ನೀಡಲಾಗುವುದು. ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ಈ ಕಾರ್ಯಕ್ರಮವು ವ್ಯವಸ್ಥಿತವಾಗಿ ಜಾರಿಯಲ್ಲಿದ್ದು ಖಾಸಗಿ ವಿದ್ಯಾ ಸಂಸ್ಥೆಗಳು ನಮ್ಮೊಂದಿಗೆ ಸಹಕರಿಸಬೇಕಿದೆ. ಅಂಗನವಾಡಿ ಮಕ್ಕಳಿಗೂ ವಿವಿಧ ರೀತಿಯ ಆರೋಗ್ಯ ತಪಾಸಣೆಯನ್ನು ನಡೆಸಲಾಗುವುದು ಎಂದರು.

ಗರ್ಭಿಣಿ, ಬಾಣಂತಿಯರಿಗೆ ಹಾಗೂ ಶಿಶುಗಳ ಆರೋಗ್ಯಕ್ಕೆ ಜನನಿ ಶಿಶು ಕಾರ್ಯಕ್ರಮದಡಿಯಲ್ಲಿ ಉಚಿತ ಔಷಧೋಪಚಾರಗಳು, ಜನನಿ ಸುರಕ್ಷತಾ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ 700 ರೂ. ಹಾಗೂ ನಗರ ಪ್ರದೇಶಗಳಲ್ಲಿ 600 ರೂ.ಗಳನ್ನು ನೀಡಲಾಗುತ್ತಿದೆ ಎಂದ ಅವರು ನಗು-ಮಗು ಕಾರ್ಯಕ್ರಮದಡಿಯಲ್ಲಿ ಬಾಣಂತಿ ಹಾಗೂ ಮಗುವನ್ನು ಮನೆಗೆ ತಲುಪಿಸುವ ಯೋಜನೆಯನ್ನು ರೂಪಿಸಿದೆ ಎಂದು ಅವರು ಹೇಳಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದಡಿ ಆಯುಷ್ಮಾನ್ ಇಲಾಖೆಯಿಂದ ಎಲ್ಲಾ ಬಿಪಿಎಲ್ ಹಾಗೂ ಎಪಿಎಲ್ ಕಾರ್ಡ್‌ಗಳನ್ನು ಹೊಂದಿದವರಿಗೆ ರಿಯಾಯಿತಿ ದರದಲ್ಲಿ ತಪಾಸಣೆ, ಎಲ್ಲಾ ಖಾಸಗಿ ಕಂಪನೆಗಳಲ್ಲಿ ಮಲೇರಿಯಾ, ಕುಷ್ಠರೋಗಗಳ ತಪಾಸಣೆಯನ್ನು ಉಚಿತವಾಗಿ ಮಾಡಲಾಗುತ್ತಿದೆ ಅಲ್ಲದೆ ಸರ್ಕಾರದಿಂದ ವಾತ್ಸಲ್ಯ ವಾಣಿ, ದಂತ ಭಾಗ್ಯ, ಸಾಂಕ್ರಾಮಿಕ ರೋಗಗಳ ಬಗ್ಗೆ ತಪಾಸಣೆ, ಮನೋ ಚೈತನ್ಯಗಳಂತ  ಯೋಜನೆಗಳ ಬಗ್ಗೆ ಸ್ವವಿವರವಾಗಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಕಾಂತಮಣಿ ಹಾಗೂ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

Share this article

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Oct 05, 2019
ಕೊಡಗು: ಜನರ ಭಾವನೆಗಳನ್ನು ಎತ್ತಿ ಹಿಡಿದಿದ್ದಕ್ಕೆ ಬಿಜೆಪಿ ...
Post by Kondi News
- Oct 05, 2019
ಕೊಡಗು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ...
Post by Kondi News
- Oct 05, 2019
ಹಾಸನ: ಸಂಸದರು ಕರೆದಿದ್ದ ಸಭೆಯ ಬಳಿಕ ಅವರೇ ತರಿಸಿಕೊಟ್ಟ ...
Has no content to show!

Visitors Counter

00554678
Today
This Month
Last Month
All days
87
87
5443
554678
Your IP: 3.238.190.82
2020-12-01 08:10

About

Newsletter

Subscribe with us your email
Top
We use cookies to improve our website. By continuing to use this website, you are giving consent to cookies being used. More details…