ಸ್ಥಳೀಯ ಸುದ್ದಿ

ಚಿನ್ನಗೆದ್ದ ಹಾಸನ ಚಿನ್ನದಂತ ಹುಡುಗರು

ಹಾಸನ: ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಹಾಸನದ ವಿದ್ಯಾರ್ಥಿಗಳು ಚಿನ್ನ ಮತ್ತು ಕಂಚಿನ ಪದಕ ಗೆದ್ದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ಸ್ಕ್ಯಾಯ್ ಕರಾಟೆ ಶಾಲೆಯ ವಿದ್ಯಾರ್ಥಿಗಳಾದ ಎಲ್.ಎಸ್.ಹರ್ಷವರ್ಧನ್, ಎಚ್.ಎಸ್. ರಾಜೇಂದ್ರ, ಎಚ್.ಎನ್. ಜೈಪ್ರಕಾಶ್ ಆ.2೦ ರಿಂದ 24 ರವರೆಗೆ ನಡೆದ ರಾಷ್ಟ್ರೀಯ ಮಟ್ಟದ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನ ಮತ್ತು ಕಂಚು ಪದಕಗಳನ್ನ ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 

ದಾವಣಗೆರೆಯ ಗಾಂಧಿ ಮೈದಾನದಲ್ಲಿ ರಾಷ್ಟ್ರಮಟ್ಟದ ಆಯ್ಕೆ ಪ್ರಕ್ರಿಯೆಯಲ್ಲಿ ಎಲ್.ಎಸ್.ಹರ್ಷವರ್ಧನ್ 70 ಕೆಜಿ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ರೆ, ಎಚ್.ಎಸ್. ರಾಜೇಂದ್ರ 64 ಕೆಜಿ ವಿಭಾಗದಲ್ಲಿ ಚಿನ್ನ  ಹಾಗೂ ಕಂಚಿನ ಪದಕವನ್ನ ಹಾಗೂ ಎಚ್.ಎನ್. ಜೈಪ್ರಕಾಶ್, ಪ್ರೌಢಶಾಲೆ ವಿಭಾಗದಲ್ಲಿ ಎರಡು ಬೆಳ್ಳಿ ಪದಕವನ್ನ ತಮ್ಮದಾಗಿಸಿಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಕ್ರೀಡೆಗೆ ಆಂಧ್ರಪ್ರದೇಶ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ದೆಹಲಿ, ತ್ರಿಪುರ, ಗುಜರಾತ್, ಜಾರ್ಖಂಡ್, ಜಮ್ಮು ಕಾಶ್ಮೀರ ಹಾಗೂ ಇತರೆ ರಾಜ್ಯಗಳಿಂದ ಸ್ಪರ್ಧಿಗಳು ಆಗಮಿಸಿದ್ದರು. ಇವರುಗಳನ್ನ ಮಣಿಸಿ ಪಟ್ಟಣದ ಸ್ಪರ್ಧಿಗಳು ವಿಜೇತರಾಗಿ ರಾಜ್ಯ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಎಂದು ಅವರ ಸಾಧನೆಗೆ ಪ್ರಕಟಣೆ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Share this article

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Oct 05, 2019
ಕೊಡಗು: ಜನರ ಭಾವನೆಗಳನ್ನು ಎತ್ತಿ ಹಿಡಿದಿದ್ದಕ್ಕೆ ಬಿಜೆಪಿ ...
Post by Kondi News
- Oct 05, 2019
ಕೊಡಗು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ...
Post by terrel
- Aug 14, 2019
  ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ...
Has no content to show!

Visitors Counter

00554687
Today
This Month
Last Month
All days
96
96
5443
554687
Your IP: 114.119.158.212
2020-12-01 08:27

About

Newsletter

Subscribe with us your email
Top
We use cookies to improve our website. By continuing to use this website, you are giving consent to cookies being used. More details…