ಸ್ಥಳೀಯ ಸುದ್ದಿ

ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಕೆ.ಆರ್.ಪೇಟೆ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ.

ರಾಜ್ಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಂಧನವನ್ನು ಖಂಡಿಸಿ ಕೆ.ಆರ್.ಪೇಟೆ ತಾಲ್ಲೂಕು ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಮೈಸೂರು-ಚನ್ನರಾಯಪಟ್ಟಣ ಹಾಗೂ ಬೇರ್ಯ- ಕೆ.ಆರ್.ಪೇಟೆ ಮುಖ್ಯ ರಸ್ತೆಯನ್ನು ಸುಮಾರು ಅರ್ಧ ಗಂಟೆಗಳ ಕಾಲ ಬಂದ್ ಮಾಡಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಜೆಡಿಎಸ್ ತಾಲ್ಲೂಕು ಘಟಕವೂ ಬೆಂಬಲ ವ್ಯಕ್ತಪಡಿಸಿದ್ದು ವಿಶೇಷವಾಗಿತ್ತು.
ಪ್ರತಿಭಟನೆಯಲ್ಲಿ
ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಕಿಕ್ಕೇರಿ ಸುರೇಶ್, ಎಂ.ಡಿ.ಕೃಷ್ಣಮೂರ್ತಿ, ಹೆಚ್.ಎಸ್.ವಿಶ್ವನಾಥ್, ಬಿ.ನಾಗೇಂದ್ರಕುಮಾರ್, ಜೆಡಿಎಸ್ ಮುಖಂಡರಾದ ಬಿ.ಎಲ್.ದೇವರಾಜು, ಹೆಚ್.ಟಿ.ಮಂಜು ಸೇರಿದಂತೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಅವರು ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು ಬಂಧಿಸಿರುವ ಕೇಂದ್ರ ಸರ್ಕಾರದ ನಡೆಯನ್ನು ಖಂಡಿಸಿದರು. ಇಡಿ, ಸಿಬಿಐ ನಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕಾಂಗ್ರೆಸ್ ಮುಖಂಡರ ಶಕ್ತಿಯನ್ನು ಕುಂದಿಸುವ ಕೆಲಸ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಇದಕ್ಕೆ ಕಾರಣವಾಗಿರುವ ಗೃಹ ಸಚಿವ ಅಮಿತ್ ಶಾ ಅವರ ದ್ವೇಷದ ರಾಜಕಾರಣವನ್ನು ಖಂಡಿಸಿದರು.

Share this article

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Oct 05, 2019
ಕೊಡಗು: ಜನರ ಭಾವನೆಗಳನ್ನು ಎತ್ತಿ ಹಿಡಿದಿದ್ದಕ್ಕೆ ಬಿಜೆಪಿ ...
Post by Kondi News
- Oct 05, 2019
ಕೊಡಗು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ...
Post by Kondi News
- Oct 05, 2019
ಹಾಸನ: ಸಂಸದರು ಕರೆದಿದ್ದ ಸಭೆಯ ಬಳಿಕ ಅವರೇ ತರಿಸಿಕೊಟ್ಟ ...
Has no content to show!

Visitors Counter

00554678
Today
This Month
Last Month
All days
87
87
5443
554678
Your IP: 3.238.190.82
2020-12-01 08:10

About

Newsletter

Subscribe with us your email
Top
We use cookies to improve our website. By continuing to use this website, you are giving consent to cookies being used. More details…