ಸ್ಥಳೀಯ ಸುದ್ದಿ

ಕನಕಪುರದ ಬಂಡೆ ಬಂಧನ : ಚನ್ನರಾಯಪಟ್ಟಣದಲ್ಲಿ ಬೆಂಕಿ ಹಚ್ಚಿ ಪ್ರತಿಭಟನೆ

ಹಾಸನ: ಅಕ್ರಮ ಆಸ್ತಿ ಪತ್ತೆ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಡಿಕೆ ಶಿ ಅವರನ್ನು ಬಂಧಿಸಿದ್ದಾರೆ.

ಜಾರಿ ನಿರ್ದೇಶನಾಲಯದ ಕಚೇರಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಸಕತ್ ಡ್ರಿಲ್ ಮಾಡಿದ ಬಳಿಕ ನೆನ್ನೆ ರಾತ್ರಿ ಡಿಕೆಶಿ ಬಂಧನವಾಗಿದೆ. ಬಂಧನ ಖಂಡಿಸಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಕೂಡ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದರು.

ನಗರದ ಹೊಸ ಬಸ್ ನಿಲ್ದಾಣದ ಕಾಂಗ್ರೆಸ್ ಕಾರ್ಯಕರ್ತರು ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ ಕಾರ್ಯಕರ್ತರು ಕೇಂದ್ರದ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದು ಧಿಕ್ಕಾರ ಕೂಗಿದ ಅವರು ಎಚ್ ಡಿ ಕುಮಾರಸ್ವಾಮಿ ಮತ್ತು ಡಿಕೆ ಶಿವಕುಮಾರ್ ಜಯಘೋಷ ಹಾಕಿದರು.

ಈ ಮಧ್ಯೆ ಹಾಸನ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದಿಂದ ಇಂದು ಬೆಳಿಗ್ಗೆ 10 ಕ್ಕೆ ನಗರದ ನಿರುವಾಗಿಲು ಆಂಜನೇಯಸ್ವಾಮಿ ದೇವಾಲಯದಲ್ಲಿ ಡಿಕೆ ಶಿವಕುಮಾರ್ ಸುಳ್ಳು ಆರೋಪಗಳಿಂದ ಮುಕ್ತವಾಗಿ ಆದಷ್ಟು ಬೇಗ ಹೊರಬರಲಿ ಅಂತ 101 ತೆಂಗಿನಕಾಯಿ ಹೊಡೆಯುವ ಮೂಲಕ ವಿಶೇಷ ಪ್ರಾರ್ಥನೆ ಸಲ್ಲಿಸಿದ್ರು.

KONDI NEWS...HASSAN

Share this article

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Oct 05, 2019
ಕೊಡಗು: ಜನರ ಭಾವನೆಗಳನ್ನು ಎತ್ತಿ ಹಿಡಿದಿದ್ದಕ್ಕೆ ಬಿಜೆಪಿ ...
Post by Kondi News
- Oct 05, 2019
ಕೊಡಗು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ...
Post by Kondi News
- Sep 08, 2019
ಹಾಸನ: ತವರಿಗೆ ಹೋಗುವುದಾಗಿ ಅಮ್ಮ ಮಗ ಕಾಲುವೆಗೆ ಹಾರಿ ...
Has no content to show!

Visitors Counter

00554647
Today
This Month
Last Month
All days
56
56
5443
554647
Your IP: 66.249.66.146
2020-12-01 07:03

About

Newsletter

Subscribe with us your email
Top
We use cookies to improve our website. By continuing to use this website, you are giving consent to cookies being used. More details…