ವಿಜಯಪುರ: ಸದ್ಯ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿ ಮಾಡಿರುವ ಫೋನ್ ಕದ್ದಾಲಿಕೆ ವಿಷಯಕ್ಕೆ ಸಂಬಂಧಪಟ್ಟಂತೆ ಮಾಜಿ ಗೃಹಸಚಿವ ಎಂ ಬಿ ಪಾಟೀಲ್ ವಿಜಯಪುರದಲ್ಲಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಫೋನ್ ಟ್ಯಾಪಿಂಗ್ ವಿಷಯಕ್ಕೆ ಸಂಬಂಧಪಟ್ಟಂತೆ ನಾನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನವರಿಗೆ ಪತ್ರ ಬರೆದು ಆ ಮೂಲಕ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸುತ್ತೇನೆ,ಮತ್ತು ಈ ಬಗ್ಗೆ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸುತ್ತೇನೆ. ಇದೊಂದು ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರು ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ನನ್ನ ಫೋನ್ ಕೂಡ ಕದ್ದಾಲಿಕೆ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ ಆದರೆ ಈ ಬಗ್ಗೆ ತನಿಖೆ ನಡೆಸಿ ವರದಿ ಬರುವವರೆಗೂ ಈ ಎಲ್ಲಾ ಊಹಾಪೋಹಗಳಿಗೆ ಕಿವಿಗೊಡುವುದಿಲ್ಲ ಎಂದು ತಿಳಿಸಿದರು.