ಅರ್ಥಪೂರ್ಣ ಸ್ವಾತಂತ್ರ್ಯ ದಿನಾಚರಣೆ

 

ಅರ್ಥಪೂರ್ಣವಾಗಿ ಮೂಡಿಬಂದ 73 ನೇ ಸ್ವಾತಂತ್ರ್ಯ ದಿನಾಚರಣೆ: ಜಿಲ್ಲಾಧಿಕಾರಿ

ಹಾಸನ: ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿಂದು ಆಯೋಜಿಸಲಾಗಿದ್ದ 73 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವದಲ್ಲಿ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಧ್ವಜಾರೋಹಣವನ್ನು ನೆರವೇರಿಸಿದರು. ಇದೇ ವೇಳೆ ಭಾರತದ ಇತಿಹಾಸ, ಕರ್ನಾಟಕ ರಾಜ್ಯ ನಡೆದು ಬಂದ ದಾರಿ  ಹಾಸನ ಜಿಲ್ಲೆಯ ಸ್ವಾತಂತ್ರ್ಯ ಹೋರಾಟ, ಸಾಧನೆಗಳ ಬಗ್ಗೆ ವಿವರಿಸುತ್ತಾ ಯುವ ಸಮುದಾಯಕ್ಕೆ ಜಿಲ್ಲಾಧಿಕಾರಿಯವರು ಶುಭ ಸಂದೇಶ ತಿಳಿಸಿದರು. 

ಗೃಹರಕ್ಷಕ ದಳ, ಸಶಸ್ತ್ರ ಸೇನಾಪಡೆ, ಎನ್.ಸಿ.ಸಿ., ಸ್ಕೌಟ್ಸ್ ಅಂಡ್ ಗೈಡ್ಸ್, ಸೇವಾದಳ, ವಿವಿಧ ಶಾಲಾ ಕಾಲೇಜುಗಳ ತಂಡ ಸೇರಿದಂತೆ ಒಟ್ಟು 40 ತಂಡಗಳಿಂದ ಆಕರ್ಷಕ ಪಥ ಸಂಚಲನ ಮೂಡಿ ಬಂದಿತು. ಸಿ.ಕೆ.ಎಸ್, ಎಸ್‍ಆರ್.ಎಸ್, ಅರವಿಂದ ಶಾಲೆಗಳ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದ  ವೀರವನಿತೆಯರ ನೃತ್ಯ ರೂಪಕ ಪ್ರದರ್ಶನ ಎಲ್ಲರ ಮನಸೊರೆಗೊಳಿಸಿತು. ಇದೇ ಸಂದರ್ಭ ಜಿಲ್ಲಾಡಳಿತವತಿಯಿಂದ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಗೈದ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. 

ಸನ್ಮಾನಿತರ ವಿವರ: 2018-19 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹಾಸನದ ಚಿಕ್ಕಹೊನ್ನೇನಹಳ್ಳಿಯ ವಿಜಯ ಇಂಗ್ಲೀಷ್ ಹೈಸ್ಕೂಲಿನ ಪ್ರಗತಿ ಎಂ.ಗೌಡ,  ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ ಅರಸೀಕೆರೆ ತಾಲ್ಲೂಕಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೀತಿ., ವಿಜ್ಞಾನ ವಿಭಾಗದಲ್ಲಿ ಚನ್ನರಾಯಪಟ್ಟಣ ತಾಲ್ಲೂಕಿನ ರೋಹಿತ್ ರಾಮನ್, ವಾಣಿಜ್ಯ ವಿಭಾಗದಲ್ಲಿ ಬೇಲೂರು ತಾಲ್ಲೂಕಿನ ಜಿ.ಸಾಣೇನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಯಶಸ್ವಿನಿ. 

ಕ್ರೀಡಾಪಟುಗಳಾದ ಮನೋಜ್, ಸಿದ್ಧಗಂಗಮ್ಮ, ಇವರು ಆಗಸ್ಟ್ 2018 ಎನ್.ಸಿ.ಸಿ. ಕ್ಷೇತ್ರದಿಂದ ಹಾಸನದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಪಿ.ಜಿ. ಕಾಲೇಜಿನ ಸಯ್ಯದ್ ಮೌಸಿನ್, ಸರ್ಕಾರಿ ವಿಜ್ಞಾನ ಕಾಲೇಜಿನ ದ್ವಿತೀಯ ಬಿ.ಎಸ್ಸಿ ವಿದ್ಯಾರ್ಥಿ ನಂದಿತಾ.ಜೆ.ಕೆ 

ಭಾರತ ಸೇವಾದಳ ಕ್ಷೇತ್ರದಿಂದ ಭಾರತ ಸೇವಾ ದಳದ ಜಿಲ್ಲಾಧ್ಯಕ್ಷರಾದ ಎಂ.ಕೆ.ಕಮಲ್ ಕುಮಾರ್, ವೈದ್ಯಕೀಯ ಸೇವೆಯಲ್ಲಿ ಜನಪ್ರಿಯ ಆಸ್ಪತ್ರೆಯ ಡಾ.ಬ್ದುಲ್ ಬಷೀರ್, ಸ್ವಾತಂತ್ರ್ಯ ಹೋರಾಟಗಾರರ ವಿಧವಾ ಪತ್ನಿ ಹಾಸನದ ವಲ್ಲಬಾಯಿ ರಸ್ತೆಯ ಗೌರಮ್ಮ, ಬಡಾವಣೆ ಪೊಲೀಸ್ ಠಾಣೆಯ ಪೊಲೀಸ್ ಸಹಾಯಕ ಸಬ್ ಇನ್ಸ್‍ಪೆಕ್ಟರಾದ ಜೆ.ಎನ್.ಮುರಳಿಧರ, ಅವರುಗಳನ್ನು ಸನ್ಮಾನಿಸಲಾಯಿತು.

ಶಾಸಕರಾದ ಪ್ರೀತಂ ಜೆ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯರಾದ ಎಂ.ಎ.ಗೋಪಾಲಸ್ವಾಮಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ನಿಂಗೇಗೌಡ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎ.ಎನ್. ಪ್ರಕಾಶ್ ಗೌಡ, ಅಪರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಂ.ಎಲ್.ವೈಶಾಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ನಂದಿನಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣೇಗೌಡ,  ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿವರಾಂ ಬಾಬು, ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜ್, ತಹಸೀಲ್ದಾರ್ ಮೇಘನಾ, ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್.ಎಂ.ಶಿವಣ್ಣ ಸೇರಿದಂತೆ ಮತ್ತಿತರರು  ಉಪಸ್ಥಿತರಿದ್ದರು.

 

- News Desk, kondi News, 

Last modified on Friday, 16 August 2019 12:41
Share this article

About author

terrel

Email This email address is being protected from spambots. You need JavaScript enabled to view it.

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Oct 05, 2019
ಕೊಡಗು: ಜನರ ಭಾವನೆಗಳನ್ನು ಎತ್ತಿ ಹಿಡಿದಿದ್ದಕ್ಕೆ ಬಿಜೆಪಿ ...
Post by Kondi News
- Oct 05, 2019
ಕೊಡಗು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ...
Post by terrel
- Aug 14, 2019
  ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ...
Has no content to show!

Visitors Counter

00554687
Today
This Month
Last Month
All days
96
96
5443
554687
Your IP: 114.119.158.212
2020-12-01 08:27

About

Newsletter

Subscribe with us your email
Top
We use cookies to improve our website. By continuing to use this website, you are giving consent to cookies being used. More details…